Acts 20:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭಾನುವಾರದಂದು, ನಾವೆಲ್ಲರು ಪ್ರಭುವಿನ ರಾತ್ರಿ ಭೋಜನಕ್ಕೆ ಒಟ್ಟಾಗಿ ಸೇರಿದೆವು. ಸಭೆ ಸೇರಿಬಂದಿದ್ದ ಜನರೊಂದಿಗೆ ಪೌಲನು ಮಾತಾಡಿದನು. ಅವನು ಮರುದಿನ ಅಲ್ಲಿಂದ ಹೊರಡಬೇಕೆಂದು ಅಲೋಚಿಸಿಕೊಂಡಿದ್ದನು. ಪೌಲನು ಮಧ್ಯರಾತ್ರಿಯವರೆಗೂ ಮಾತಾಡುತ್ತಲೇ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.
Kannada BSI Bible 2016
ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಾರದ ಮೊದಲನೆಯ ದಿವಸದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಕೂಡಿಬಂದಾಗ ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಸರಿಹೊತ್ತಿನವರೆಗೂ ಉಪನ್ಯಾಸವನ್ನು ನಡಿಸಿದನು.
Kannada Bible (KNCL) BSI 2016
ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.