Acts 20:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯುತಿಕ ಎಂಬ ಯುವಕನು ಕಿಟಕಿಯಲ್ಲಿ ಕುಳಿತುಕೊಂಡಿದ್ದನು. ಪೌಲನು ಮಾತಾಡುತ್ತಲೇ ಇದ್ದನು. ಇತ್ತ ಯುವಕನು ಗಾಢವಾಗಿ ನಿದ್ರಿಸುತ್ತಾ ಮೂರನೆ ಅಂತಸ್ತಿನಿಂದ ಕೆಳಗಡೆ ಬಿದ್ದುಬಿಟ್ಟನು. ಜನರು ಕೆಳಗಿಳಿದು ಹೋಗಿ ಅವನನ್ನು ಎತ್ತಿ ನೋಡಿದಾಗ ಅವನು ಸತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.
Kannada BSI Bible 2016
ಆಗ ಕಿಟಕಿಯಲ್ಲಿ ಕೂತು ಕೊಂಡಿದ್ದ ಯೂತಿಕನೆಂಬ ಒಬ್ಬ ಯೌವನಸ್ಥನು ಗಾಢ ನಿದ್ರೆಯಲ್ಲಿದ್ದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನಿಗೆ ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಗೆ ಬಿದ್ದನು; ಅವನನ್ನು ಎತ್ತಿದಾಗ ಅವನು ಸತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೂತಿಖನೆಂಬ ಒಬ್ಬ ಯೌನವಸ್ಥನು ಕಿಟಿಕಿಯಲ್ಲಿ ಕೂತುಕೊಂಡು ಗಾಢನಿದ್ರೆಯಿಂದ ತೂಕಡಿಸಿದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನು ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದನು; ಅವನನ್ನು ಎತ್ತಿನೋಡುವಾಗ ಸತ್ತಿದ್ದನು.
Kannada Bible (KNCL) BSI 2016
ಯುತಿಕ ಎಂಬ ಯುವಕನು ಕಿಟಕಿಯಲ್ಲಿ ಕುಳಿತುಕೊಂಡಿದ್ದನು. ಪೌಲನು ದೀರ್ಘಕಾಲ ಮಾತನಾಡುತ್ತಲೇ ಇದ್ದುದರಿಂದ ಯುತಿಕನಿಗೆ ಗಾಢನಿದ್ರೆ ಹತ್ತಿತು; ತೂಕಡಿಕೆ ಹೆಚ್ಚಾಗಿ ಅವನು ಮೂರನೆಯ ಅಂತಸ್ತಿನಿಂದ ನೆಲಕ್ಕೆ ಬಿದ್ದುಬಿಟ್ಟನು. ಅವನನ್ನು ಎತ್ತಿ ನೋಡುವಾಗ ಅವನು ಸತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಕಿಟಿಕಿಯಲ್ಲಿ ಯೂತಿಖ ಎಂಬ ಹೆಸರಿನ ಒಬ್ಬ ಯುವಕನು ಕುಳಿತುಕೊಂಡಿದ್ದನು. ಪೌಲನು ಬಹಳ ಹೊತ್ತು ಬೋಧಿಸುತ್ತಲೇ ಇದ್ದುದರಿಂದ ಅವನಿಗೆ ಗಾಢನಿದ್ರೆ ಹತ್ತಿತು. ನಿದ್ರಿಸುತ್ತಿದ್ದ ಅವನು ಮೂರನೇ ಅಂತಸ್ತಿನಿಂದ ಕೆಳಕ್ಕೆ ಬಿದ್ದನು. ಅವನನ್ನು ಎತ್ತಿಕೊಂಡಾಗ ಅವನು ಸತ್ತೇ ಹೋಗಿದ್ದನು.