Acts 21:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವೆಲ್ಲರೂ ಹಿರಿಯರನ್ನು ಬೀಳ್ಕೊಟ್ಟ ಬಳಿಕ ನೌಕಾಯಾನ ಮಾಡಿ ನೇರವಾಗಿ ಕೋಸ್ ದ್ವೀಪಕ್ಕೆ ಹೋದೆವು. ಮರುದಿನ ರೋದ ದ್ವೀಪಕ್ಕೆ ಹೋದೆವು ಮತ್ತು ಅಲ್ಲಿಂದ ಪತಾರಕ್ಕೆ ಹೋದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೇರವಾಗಿ ಕೋಸ್ ದ್ವೀಪಕ್ಕೆ ಬಂದು ಸೇರಿದೆವು. ಮರುದಿನ ರೋದ ದ್ವೀಪಕ್ಕೆ ಹೋಗಿ ಅಲ್ಲಿಂದ ಪತರ ಪಟ್ಟಣಕ್ಕೆ ಬಂದೆವು.
Kannada BSI Bible 2016
ಇದಾದ ಮೇಲೆ ನಾವು ಅವರನ್ನು ಬಿಟ್ಟು ಸಮುದ್ರಪ್ರಯಾಣವಾಗಿ ನೆಟ್ಟಗೆ ಕೋಸ್‌ಗೆ ಬಂದೆವು. ಮರುದಿನ ರೋದಕ್ಕೆ ಹೋಗಿ ಅಲ್ಲಿಂದ ಪತರಕ್ಕೆ ಸೇರಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಪ್ರಯಾಸದಿಂದ ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೆಟ್ಟಗೆ ಹೋಗಿ ಕೋಸ್ ದ್ವೀಪಕ್ಕೆ ಸೇರಿದೆವು. ಮರುದಿನ ರೋದಕ್ಕೆ ಹೋಗಿ ಅಲ್ಲಿಂದ ಪತರಕ್ಕೆ ಬಂದೆವು.
Kannada Bible (KNCL) BSI 2016
ನಾವು ಅವರನ್ನು ಬಿಟ್ಟು ಅಗಲಿದ ಮೇಲೆ ನೇರವಾಗಿ ನೌಕಾಯಾನ ಮಾಡಿ ಕೋಸ್‍ದ್ವೀಪಕ್ಕೆ ಬಂದೆವು. ಮರುದಿನ ನಾವು ರೋದ ಎಂಬ ಸ್ಥಳವನ್ನು ತಲುಪಿ ಅಲ್ಲಿಂದ ಪತಾರಕ್ಕೆ ಹೋದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಅವರನ್ನು ಅಗಲಿದ ನಂತರ, ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ ನೇರವಾಗಿ ಕೋಸ್ ದ್ವೀಪಕ್ಕೆ ಹೋದೆವು. ಮರುದಿನ ರೋದ ಎಂಬಲ್ಲಿಗೆ ಹೋಗಿ ಅಲ್ಲಿಂದ ಪತರಕ್ಕೆ ಬಂದೆವು.