Acts 21:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ‘ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು”’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.
Kannada BSI Bible 2016
ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನ ನಡುಕಟ್ಟನ್ನು ತೆಗೆದು ತನ್ನ ಕೈಕಾಲುಗಳನ್ನು ಕಟ್ಟಿಕೊಂಡು - ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇವಿುನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿಕೊಡುವರು, ಹೀಗೆ ಪವಿತ್ರಾತ್ಮನು ಹೇಳುತ್ತಾನೆಂಬದಾಗಿ ಹೇಳಿದನು.
Kannada Bible (KNCL) BSI 2016
ಅವನು ಪೌಲನ ಸೊಂಟಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳನ್ನು ಬಿಗಿದುಕೊಂಡು, “ಪವಿತ್ರಾತ್ಮ ಹೀಗೆನ್ನುತ್ತಾರೆ: ‘ಈ ಸೊಂಟಪಟ್ಟಿಯು ಯಾರದೋ ಅವನನ್ನು ಜೆರುಸಲೇಮಿನಲ್ಲಿ ಯೆಹೂದ್ಯರು ಹೀಗೆಯೇ ಕಟ್ಟಿ, ಅನ್ಯಧರ್ಮೀಯರ ವಶಕ್ಕೆ ಒಪ್ಪಿಸುವರು,’ “ ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’ ” ಎಂದನು.