Acts 21:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.
Kannada BSI Bible 2016
ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಇದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ ಹೇಳಿದ್ದು - ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೋಡುತ್ತೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದಲ್ಲಿ ಅಭಿಮಾನಿಗಳಾಗಿದ್ದಾರೆ.
Kannada Bible (KNCL) BSI 2016
ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: \ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.