Acts 21:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಅವರನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಿ ಅವರ ಶುದ್ಧಾಚಾರದ ಸಂಪ್ರದಾಯದಲ್ಲಿ ಭಾಗವಹಿಸು. ಅವರ ಖರ್ಚುವೆಚ್ಚನ್ನೆಲ್ಲ ಕೊಡು. ಬಳಿಕ ಅವರು ತಮ್ಮ ತಲೆಬೋಳಿಸಿಕೊಳ್ಳಲಿ. ನೀನು ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿದ ಸಂಗತಿಗಳು ಸತ್ಯವಲ್ಲವೆಂದು ಅವರೆಲ್ಲರಿಗೂ ಮನದಟ್ಟಾಗುವುದು. ಸ್ವತಃ ನೀನೇ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗುತ್ತಿರುವುದನ್ನು ಅವರೆಲ್ಲರೂ ಕಣ್ಣಾರೆ ಕಾಣುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.
Kannada BSI Bible 2016
ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅವರನ್ನು ಕರೆದುಕೊಂಡು ಹೋಗಿ ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ವ್ರತವನ್ನು ತೀರಿಸಿಕೊಳ್ಳುವದಕ್ಕಾಗಿ ಅವರಿಗೋಸ್ಕರ ಹಣ ವೆಚ್ಚಮಾಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ ನೀನಾದರೂ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ ಎಂತಲೂ ತಿಳುಕೊಳ್ಳುವರು.
Kannada Bible (KNCL) BSI 2016
ನೀನು ಅವರನ್ನು ಕರೆದುಕೊಂಡು ಹೋಗಿ ಅವರ ಜೊತೆಯಲ್ಲಿ ನೀನೂ ಶುದ್ಧಾಚಾರವಿಧಿಯನ್ನು ಮಾಡಿಸಿಕೊ. ಅವರ ಖರ್ಚುವೆಚ್ಚವನ್ನೆಲ್ಲಾ ನೀನೇ ವಹಿಸಿಕೋ. ಅವರು ಮುಂಡನ ಮಾಡಿಸಿಕೊಳ್ಳಲಿ. ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿಸಿಕೊಂಡಿರುವ ವಿಷಯ ನಿಜವಲ್ಲವೆಂದೂ ನೀನು ಕೂಡ ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯುತ್ತಿರುವೆ ಎಂದೂ ಅವರೆಲ್ಲರಿಗೂ ಮನವರಿಕೆಯಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಇವರನ್ನು ಕರೆದುಕೊಂಡು ಹೋಗಿ, ಅವರೊಂದಿಗೆ ನಿನ್ನನ್ನು ಶುದ್ಧಿಮಾಡಿಕೊಂಡು, ಅವರು ತಮ್ಮ ಕ್ಷೌರ ಮಾಡಿಸಿಕೊಳ್ಳುವ ಖರ್ಚನ್ನು ನೀನೇ ಪೂರೈಸು. ಆಗ ನಿನ್ನ ವಿಷಯದಲ್ಲಿ ಕೇಳಿರುವ ಸಂಗತಿಗಳು ನಿಜವಲ್ಲ ಮತ್ತು ನೀನು ಮೋಶೆಯ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತೀ ಎಂದು ಎಲ್ಲರಿಗೂ ತಿಳಿದುಬರುವುದು.