Acts 21:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಪೌಲನು ಆ ನಾಲ್ಕುಮಂದಿಯನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಮರುದಿನ ಪೌಲನು, ಶುದ್ಧಾಚಾರದ ವ್ರತದಲ್ಲಿ ಭಾಗವಹಿಸಿದನು. ಬಳಿಕ ಅವನು ದೇವಾಲಯಕ್ಕೆ ಹೋಗಿ ಶುದ್ಧಾಚಾರದ ಸಂಪ್ರದಾಯ ಮುಗಿಯುವ ದಿನವನ್ನು ಪ್ರಕಟಿಸಿದನು. ಕೊನೆಯ ದಿನದಲ್ಲಿ ಪ್ರತಿಯೊಬ್ಬ ವ್ಯಕ್ತಿಗಾಗಿಯೂ ಯಜ್ಞವನ್ನರ್ಪಿಸಬೇಕಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.
Kannada BSI Bible 2016
ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪೌಲನು ಆ ಮನುಷ್ಯರನ್ನು ಕರೆದುಕೊಂಡು ಮರುದಿನ ಅವರೊಡನೆ ತನ್ನನ್ನು ಶುದ್ಧಿಮಾಡಿಕೊಂಡು ವ್ರತದ ದಿವಸಗಳು ಮುಗಿದವೆಂದು ತಿಳಿಸುವವನಾಗಿ ದೇವಾಲಯದೊಳಗೆ ಹೋದನು. ಪ್ರತಿಯೊಬ್ಬನಿಗೋಸ್ಕರ ಮಾಡಬೇಕಾದ ಅರ್ಪಣೆಯನ್ನು ಮುಂದೆ ಅರ್ಪಿಸಬೇಕಾಗಿತ್ತು.
Kannada Bible (KNCL) BSI 2016
ಅಂತೆಯೇ ಪೌಲನು ಮಾರನೆಯ ದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ಮಹಾದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿನ ಪೌಲನು ಆ ನಾಲ್ವರೊಂದಿಗೆ ತನ್ನನ್ನು ಶುದ್ಧೀಕರಿಸಿಕೊಂಡನು. ಅನಂತರ ಶುದ್ಧಾಚಾರ ಮುಗಿಯುವ ದಿನಗಳ ಬಗ್ಗೆ ತಿಳಿಸುವುದಕ್ಕಾಗಿ ದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಅರ್ಪಣೆಯು ಆಗಬೇಕೆಂಬುದರ ಬಗ್ಗೆಯೂ ಸೂಚಿಸಿದನು.