Acts 21:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಏಳು ದಿನಗಳ ಅವಧಿ ಮುಗಿಯುವುದರಲ್ಲಿತ್ತು. ಆದರೆ ಏಷ್ಯಾದಿಂದ ಬಂದಿದ್ದ ಕೆಲವು ಯೆಹೂದ್ಯರು ಪೌಲನನ್ನು ಕಂಡು ಜನಸಮೂಹವನ್ನು ಉದ್ದೇಶಿಸಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;
Kannada BSI Bible 2016
ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಕಲಕಿ ಅವನನ್ನು ಹಿಡಿದು -
Kannada Bible (KNCL) BSI 2016
ಶುದ್ಧಾಚಾರದ ಏಳು ದಿನಗಳ ಅವಧಿ ಮುಗಿಯುತ್ತಿದ್ದಂತೆ ಏಷ್ಯದ ಕೆಲವು ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡರು. ಕೂಡಲೇ ಅವರು ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳು ದಿನಗಳ ಅವಧಿ ಮುಗಿಯುತ್ತಿದ್ದಾಗ, ಏಷ್ಯಾ ಪ್ರಾಂತದ ಕೆಲವು ಯೆಹೂದ್ಯ ಜನರು ದೇವಾಲಯದಲ್ಲಿ ಪೌಲನನ್ನು ಕಂಡರು. ಅವರು ಇಡೀ ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.