Acts 21:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಈ ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಈ ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!”’ ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.
Kannada BSI Bible 2016
ಇಸ್ರಾಯೇಲ್‌ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ಜನರೇ, ಸಹಾಯಮಾಡಿರಿ, ನಮ್ಮ ಜನರಿಗೂ ಧರ್ಮಶಾಸ್ತ್ರಕ್ಕೂ ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ ಎಂದು ಕೂಗಿದರು.
Kannada Bible (KNCL) BSI 2016
“ಇಸ್ರಯೇಲಿನ ಮಹಾಜನರೇ, ಬೇಗ ಬನ್ನಿ; ನಮ್ಮ ಜನಾಂಗಕ್ಕೂ ನಮ್ಮ ಧರ್ಮಶಾಸ್ತ್ರಕ್ಕೂ ಈ ಮಹಾದೇವಾಲಯಕ್ಕೂ ವಿರುದ್ಧವಾಗಿ ಬೋಧಿಸುವ ವ್ಯಕ್ತಿ ಇವನೇ; ಎಲ್ಲೆಡೆಯಲ್ಲೂ ಎಲ್ಲರಿಗೂ ಇವನು ನಮಗೆ ವಿರುದ್ಧವಾಗಿ ಬೋಧಿಸುತ್ತಾನೆ. ಅಷ್ಟು ಮಾತ್ರವಲ್ಲ. ಈ ಪವಿತ್ರಾಲಯದೊಳಕ್ಕೆ ಅನ್ಯಧರ್ಮೀಯರನ್ನು ಕರೆತಂದು ಇದನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರೇ, ನಮಗೆ ಸಹಾಯಮಾಡಿರಿ! ನಮ್ಮ ಜನರಿಗೂ ನಮ್ಮ ನಿಯಮಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲಾ ಜನರಿಗೆ ಬೋಧಿಸುತ್ತಿರುವ ಮನುಷ್ಯನು ಇವನೇ. ಅಷ್ಟೇ ಅಲ್ಲ, ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪವಿತ್ರ ಸ್ಥಳವನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿ ಹೇಳಿದರು.