Acts 21:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
(ಜೆರುಸಲೇಮಿನಲ್ಲಿ ಪೌಲನೊಂದಿಗಿದ್ದ ತ್ರೊಫಿಮ ಎಂಬವನನ್ನು ಆ ಯೆಹೂದ್ಯರು ನೋಡಿದ್ದರು. ಎಫೆಸದ ತ್ರೊಫಿಮನು ಗ್ರೀಕನಾಗಿದ್ದನು. ಪೌಲನು ಇವನನ್ನು ಪವಿತ್ರ ಸ್ಥಳದೊಳಗೆ ಕರೆದುಕೊಂಡು ಹೋಗಿದ್ದಾನೆಂದು ಅವರು ಭಾವಿಸಿಕೊಂಡರು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲು ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.
Kannada BSI Bible 2016
(ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂಚೆ ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ಕಂಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.
Kannada Bible (KNCL) BSI 2016
ಎಫೆಸದ ತ್ರೊಫಿಮ ಎಂಬವನು ಪೌಲನ ಸಂಗಡ ಪಟ್ಟಣದಲ್ಲಿ ಇದ್ದುದನ್ನು ಅವರು ನೋಡಿದ್ದರು. ಈಗ ಅವನನ್ನೂ ದೇವಾಲಯದೊಳಕ್ಕೆ ಪೌಲನು ಕರೆದುಕೊಂಡು ಬಂದಿರಬಹುದೆಂದು ಅವರು ಭಾವಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮೊದಲು ಪಟ್ಟಣದಲ್ಲಿ ಪೌಲನೊಂದಿಗೆ ಎಫೆಸದ ತ್ರೊಫಿಮ ಎಂಬವನು ಇದ್ದುದನ್ನು ಕಂಡಿದ್ದರಿಂದ, ಪೌಲನು ಈಗ ಅವನನ್ನು ದೇವಾಲಯದೊಳಗೆ ಕರೆದುಕೊಂಡು ಬಂದಿರಬಹುದೆಂದು ಅವರು ಭಾವಿಸಿದರು.