Acts 21:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು. ಅದು ನಮ್ಮ ಉತ್ತರದಿಕ್ಕಿನಲ್ಲಿ ಕಾಣುತ್ತಿತ್ತು. ಆದರೆ ನಾವು ಹಡಗನ್ನು ಅಲ್ಲಿ ನಿಲ್ಲಿಸದೆ ಸಿರಿಯ ದೇಶಕ್ಕೆ ಪ್ರಯಾಣ ಮಾಡಿ ಟೈರ್ ಪಟ್ಟಣದಲ್ಲಿ ಹಡಗನ್ನು ನಿಲ್ಲಿಸಿದೆವು. ಯಾಕೆಂದರೆ ಹಡಗಿನಿಂದ ಸರಕನ್ನು ಇಳಿಸಬೇಕಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.
Kannada BSI Bible 2016
ನಾವು ಕುಪ್ರವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದ ಕಡೆಗೆ ಸಾಗಿ ತೂರ್‌ಗೆ ಬಂದು ಇಳಿದೆವು. ಹಡಗು ಅಲ್ಲಿ ಸರಕನ್ನು ಇಳಿಸ ಬೇಕಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂದೆ ಕುಪ್ರದ್ವೀಪವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್‍ಪಟ್ಟಣಕ್ಕೆ ಬಂದು ಇಳಿದೆವು. ಯಾಕಂದರೆ ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.
Kannada Bible (KNCL) BSI 2016
ಸೈಪ್ರಸನ್ನು ಸಮೀಪಿಸಿದಾಗ ಅದನ್ನು ಎಡಕ್ಕೆ ಬಿಟ್ಟು ಸಿರಿಯ ದೇಶದ ಕಡೆಗೆ ಸಾಗಿ, ಟೈರ್ ಎಂಬಲ್ಲಿ ಬಂದು ಇಳಿದೆವು. ಇಲ್ಲಿ ಹಡಗಿನ ಸರಕನ್ನು ಇಳಿಸಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು.