Acts 21:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಕ್ಷಣವೇ ಅವನು ಕೆಲವು ಸೇನಾಧಿಕಾರಿಗಳನ್ನು ಮತ್ತು ಸೈನಿಕರನ್ನು ತನ್ನೊಂದಿಗೆ ಕರೆದುಕೊಂಡು ಜನಸಮೂಹದ ಕಡೆಗೆ ಹೋದನು. ಸೇನಾಧಿಪತಿಯನ್ನು ಮತ್ತು ಅವನ ಸೈನಿಕರನ್ನು ಕಂಡ ಜನರು ಪೌಲನಿಗೆ ಹೊಡೆಯುವುದನ್ನು ನಿಲ್ಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು.
Kannada BSI Bible 2016
ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತಕ್ಷಣವೇ ಸಿಪಾಯಿಗಳನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಮೇಲೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
Kannada Bible (KNCL) BSI 2016
ಆ ಕ್ಷಣವೇ, ಅವನು ಕೆಲವು ಶತಾಧಿಪತಿಗಳನ್ನೂ ಸೈನಿಕರನ್ನೂ ಕರೆದುಕೊಂಡು ಜನಸಮೂಹವಿದ್ದ ಕಡೆ ಧಾವಿಸಿದನು. ಸೈನಿಕರೊಡನೆ ಬರುತ್ತಿರುವ ಸೈನ್ಯಾಧಿಪತಿಯನ್ನು ಕಂಡು ಜನರು ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ಕರೆದುಕೊಂಡು ಜನಸಮೂಹದ ಬಳಿಗೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಅವನ ಸೈನಿಕರನ್ನೂ ಕಂಡಾಗ ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು.