Acts 21:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೈನಿಕರು ಪೌಲನನ್ನು ಸೈನ್ಯದ ಕೋಟೆಯೊಳಗೆ ಕೊಂಡೊಯ್ಯುತ್ತಿದ್ದಾಗ, ಪೌಲನು ಸೇನಾಧಿಪತಿಗೆ, “ನಾನು ನಿನ್ನೊಂದಿಗೆ ಸ್ವಲ್ಪ ಮಾತಾಡಬಹುದೇ?” ಎಂದು ಕೇಳಿದನು. ಸೇನಾಧಿಪತಿಯು, “ಓಹೋ, ನಿನಗೆ ಗ್ರೀಕ್ ಭಾಷೆ ಗೊತ್ತಿದೆಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, “ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ”? ಎಂದು ಕೇಳಲು ಅವನು; “ಗ್ರೀಕ್ ಭಾಷೆ ನಿನಗೆ ಬರುತ್ತದೋ?
Kannada BSI Bible 2016
ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್ ಮಾತನಾಡ ಬಲ್ಲೆಯಾ?
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನನ್ನು ಕೋಟೆಯೊಳಗೆ ಸೇರಿಸುವದರೊಳಗಾಗಿ ಅವನು ಆ ಸಹಸ್ರಾಧಿಪತಿಯನ್ನು - ನಿನಗೆ ಒಂದು ಮಾತು ಹೇಳುವದಕ್ಕೆ ನನಗೆ ಅಪ್ಪಣೆ ಆದೀತೇ? ಎಂದು ಕೇಳಲು ಅವನು - ಗ್ರೀಕ್ ಭಾಷೆ ನಿನಗೆ ಬರುತ್ತದೋ?
Kannada Bible (KNCL) BSI 2016
ಪೌಲನನ್ನು ಕೋಟೆಯೊಳಕ್ಕೆ ಕೊಂಡು ಒಯ್ಯುತ್ತಿದ್ದಾಗ, ಅವನು ಸೈನ್ಯಾಧಿಪತಿಗೆ, “ನಾನು ನಿಮ್ಮೊಡನೆ ಸ್ವಲ್ಪ ಮಾತಾಡಬಹುದೇ?’ ಎಂದನು. ಅದಕ್ಕೆ ಅವನು, “ನಿನಗೆ ಗ್ರೀಕ್‍ಭಾಷೆಯೂ ಗೊತ್ತಿದೆಯಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೈನಿಕರು ಪೌಲನನ್ನು ಅವರ ಪಾಳ್ಯದೊಳಗೆ ಒಯ್ಯುತ್ತಿದ್ದಾಗ, ಅವನು ಸಹಸ್ರಾಧಿಪತಿಗೆ, “ನಾನು ನಿನ್ನೊಡನೆ ಸ್ವಲ್ಪ ಮಾತನಾಡುವುದಕ್ಕೆ ಅಪ್ಪಣೆಯಾದೀತೇ?” ಎಂದು ಕೇಳಲು, ಅದಕ್ಕೆ ಅವನು, “ನಿನಗೆ ಗ್ರೀಕ್ ಭಾಷೆಯೂ ಗೊತ್ತಿದೆಯೋ?”