Acts 21:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಾಗಾದರೆ, ನಾನು ಯೋಚಿಸಿದ ವ್ಯಕ್ತಿ ನೀನಲ್ಲ. ಸ್ವಲ್ಪಕಾಲದ ಹಿಂದೆ ಗಲಭೆ ಆರಂಭಿಸಿದ ಈಜಿಪ್ಟಿನವನೇ ನೀನೆಂದು ನಾನು ಭಾವಿಸಿದ್ದೆ. ಆ ಈಜಿಪ್ಟಿನವನು ನಾಲ್ಕುಸಾವಿರ ಮಂದಿ ಕೊಲೆಗಾರರನ್ನು ಮರಳುಗಾಡಿಗೆ ಕರೆದುಕೊಂಡು ಹೋದನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.
Kannada BSI Bible 2016
ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವು ದಿವಸಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತುಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ ಎಂದು ಕೇಳಿದನು.
Kannada Bible (KNCL) BSI 2016
ಹಾಗಾದರೆ ಕೆಲವು ಕಾಲದ ಹಿಂದೆ ಕ್ರಾಂತಿಯೆಬ್ಬಿಸಿ ನಾಲ್ಕು ಸಾವಿರ ಡಕಾಯಿತರನ್ನು ಅಡವಿಗೆ ಕರೆದುಕೊಂಡು ಹೋದ ಈಜಿಪ್ಟಿನವನು ನೀನೇ ಅಲ್ಲವೇ?’ ಎಂದು ಪ್ರಶ್ನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹಾಗಾದರೆ ಕೆಲವು ಸಮಯದ ಹಿಂದೆ ದಂಗೆಯೆಬ್ಬಿಸಿ ನಾಲ್ಕು ಸಾವಿರ ಉಗ್ರಗಾಮಿಗಳನ್ನು ಅರಣ್ಯಕ್ಕೆ ಕರೆದುಕೊಂಡುಹೋದ ಈಜಿಪ್ಟಿನವನು ನೀನಲ್ಲವೋ?” ಎಂದನು.