Acts 21:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಟೈರ್ ನಲ್ಲಿ ಯೇಸುವಿನಲ್ಲಿ ಕೆಲವು ಶಿಷ್ಯರನ್ನು ಕಂಡೆವು. ಅವರೊಂದಿಗೆ ಏಳು ದಿನ ತಂಗಿದ್ದೆವು. ಅವರು ಪವಿತ್ರಾತ್ಮನ ಪ್ರೇರಣೆಯಿಂದ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಾರದು” ಎಂದು ಎಚ್ಚರಿಕೆ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.
Kannada BSI Bible 2016
ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಶಿಷ್ಯರನ್ನು ಹುಡುಕಿ ಕಂಡು ಏಳು ದಿವಸ ನಿಂತೆವು. ಅವರು ಆತ್ಮನ ಪ್ರೇರಣೆಯಿಂದ ಪೌಲನಿಗೆ - ನೀನು ಯೆರೂಸಲೇವಿುಗೆ ಕಾಲಿಡಬೇಡವೆಂದು ಹೇಳಿದರು.
Kannada Bible (KNCL) BSI 2016
ಅಲ್ಲಿಯ ಭಕ್ತಾದಿಗಳನ್ನು ಗುರುತುಹಚ್ಚಿ ಒಂದು ವಾರ ಅವರೊಂದಿಗೆ ಇದ್ದೆವು. ಇವರು ಪವಿತ್ರಾತ್ಮಪ್ರೇರಣೆಯಿಂದ ಜೆರುಸಲೇಮಿಗೆ ಹೋಗಬಾರದೆಂದು ಪೌಲನಿಗೆ ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಅವರೊಂದಿಗೆ ಏಳು ದಿನ ಇದ್ದೆವು. ಪೌಲನು ಯೆರೂಸಲೇಮಿಗೆ ಹೋಗಬಾರದೆಂದು ಅವರು ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದರು.