Acts 21:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರೊಂದಿಗೆ ಮಾತಾಡಲು ಸೇನಾಧಿಪತಿ ಪೌಲನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡನು. ಬಳಿಕ, ಮೌನವಾಗಿರುವಂತೆ ಜನರಿಗೆ ಕೈಸನ್ನೆ ಮಾಡಿದನು. ಜನರು ಮೌನವಾದರು. ಆಗ ಪೌಲನು ಅವರೊಂದಿಗೆ ಯೆಹೂದ್ಯರ ಭಾಷೆಯಲ್ಲಿ ಮಾತಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು.,
Kannada BSI Bible 2016
ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹಸ್ರಾಧಿಪತಿಯು ಅಪ್ಪಣೆ ಕೊಡಲು ಪೌಲನು ಮೆಟ್ಲುಗಳ ಮೇಲೆ ನಿಂತುಕೊಂಡು ಜನರಿಗೆ ಕೈಸನ್ನೆಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ -
Kannada Bible (KNCL) BSI 2016
ಸೈನ್ಯಾಧಿಪತಿ ಅಪ್ಪಣೆ ಕೊಡಲು, ಪೌಲನು ಮೆಟ್ಟಲಿನ ಮೇಲೆ ನಿಂತು ಜನರನ್ನು ನೋಡಿ ಮೌನವಾಗಿರುವಂತೆ ಕೈಸನ್ನೆ ಮಾಡಿದನು. ಆಗ ನಿಶ್ಯಬ್ದ ಉಂಟಾಯಿತು. ಅನಂತರ ಅವರನ್ನು ಸಂಬೋಧಿಸಿ ಹಿಬ್ರುಭಾಷೆಯಲ್ಲಿ ಮಾತಾಡುತ್ತಾ ಹೀಗೆಂದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಹಸ್ರಾಧಿಪತಿಯ ಅಪ್ಪಣೆ ಪಡೆದುಕೊಂಡು, ಪೌಲನು ಮೆಟ್ಟಲುಗಳ ಮೇಲೆ ನಿಂತುಕೊಂಡು ಜನಸಮೂಹಕ್ಕೆ ಸುಮ್ಮನಿರುವಂತೆ ಸನ್ನೆಮಾಡಲು, ಅವರು ಬಹು ನಿಶ್ಶಬ್ದರಾದಾಗ ಅವನು ಹೀಬ್ರೂ ಭಾಷೆಯಲ್ಲಿ ಅವರಿಗೆ ಹೀಗೆಂದನು: