Acts 21:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ ನಾವು ಪ್ಟೊಲೊಮಾಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಹೋದೆವು. ಅಲ್ಲಿ ನಾವು ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ತಂಗಿದೆವು. ಸುವಾರ್ತೆಯನ್ನು ತಿಳಿಸುವುದೇ ಫಿಲಿಪ್ಪನ ಕೆಲಸವಾಗಿತ್ತು. ಏಳುಮಂದಿ ಸಹಾಯಕರುಗಳಲ್ಲಿ ಅವನೂ ಒಬ್ಬನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.
Kannada BSI Bible 2016
ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಹೊರಟು ಕೈಸರೈಯಕ್ಕೆ ಬಂದು ಸೌವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳ್ವರಲ್ಲಿ ಒಬ್ಬನು.
Kannada Bible (KNCL) BSI 2016
ಮಾರನೆಯ ದಿನ ಅಲ್ಲಿಂದ ಹೊರಟು ಸೆಜರೇಯಕ್ಕೆ ಬಂದೆವು. ಅಲ್ಲಿ ಶುಭಸಂದೇಶ ಪ್ರಚಾರಕ ಫಿಲಿಪ್ಪನ ಮನೆಗೆ ಹೋಗಿ ಅವನೊಡನೆ ತಂಗಿದೆವು. ಜೆರುಸಲೇಮಿನಲ್ಲಿ ಆಯ್ಕೆಯಾದ ಏಳುಮಂದಿಯಲ್ಲಿ ಇವನೂ ಒಬ್ಬನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿನ ಹೊರಟು ಕೈಸರೈಯ ಪಟ್ಟಣವನ್ನು ತಲುಪಿದೆವು. ಅಲ್ಲಿ ಏಳು ಜನರಲ್ಲಿ ಒಬ್ಬನಾದ, ಫಿಲಿಪ್ಪನೆಂಬ ಸುವಾರ್ತಿಕನ ಮನೆಯಲ್ಲಿ ತಂಗಿದೆವು.