Acts 22:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು, ‘ಪ್ರಭುವೇ, ನಾನೇನು ಮಾಡಲಿ?” ಎಂದೆನು. ಪ್ರಭುವು ‘ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು’ ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು.
Kannada BSI Bible 2016
ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು - ಕರ್ತನೇ, ನಾನೇನು ಮಾಡಬೇಕು? ಎಂದು ಕೇಳಲು ಕರ್ತನು ನನಗೆ - ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವದಕ್ಕೆ ನಿನಗೆ ನೇವಿುಸಿರುವದೆಲ್ಲಾ ಅಲ್ಲಿ ತಿಳಿಸಲ್ಪಡುವದು ಎಂದು ಹೇಳಿದನು.
Kannada Bible (KNCL) BSI 2016
‘ನಾನೇನು ಮಾಡಬೇಕು ಪ್ರಭೂ,?’ ಎಂದು ಕೇಳಿದೆ. ಅದಕ್ಕೆ ಪ್ರಭು, ‘ಏಳು, ದಮಸ್ಕಸಿಗೆ ಹೋಗು, ನೀನು ಏನು ಮಾಡಬೇಕೆಂದು ನಿಶ್ಚಯಿಸಲಾಗಿದೆಯೋ ಅದೆಲ್ಲವನ್ನೂ ನಿನಗೆ ತಿಳಿಸಲಾಗುವುದು,’ ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ನಾನು, ‘ಸ್ವಾಮಿ, ನಾನೇನು ಮಾಡಬೇಕು?’ ಎಂದು ಕೇಳಲು, “ ‘ಎದ್ದೇಳು, ದಮಸ್ಕದೊಳಗೆ ಹೋಗು, ನೀನು ಏನೇನು ಮಾಡಬೇಕಾಗಿದೆಯೋ ಅದೆಲ್ಲವನ್ನು ನಿನಗೆ ಅಲ್ಲಿ ಹೇಳಲಾಗುವುದು,’ ಎಂದು ಕರ್ತ ಯೇಸು ನನಗೆ ಹೇಳಿದರು.