Acts 22:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಕಾಶಮಾನವಾದ ಆ ಬೆಳಕು ನನ್ನನ್ನು ಕುರುಡನನ್ನಾಗಿ ಮಾಡಿದ್ದರಿಂದ ನನಗೆ ಏನೂ ಕಾಣಲಿಲ್ಲ. ಆದ್ದರಿಂದ ಆ ಜನರು ನನ್ನನ್ನು ದಮಸ್ಕಕ್ಕೆ ಕೈಹಿಡಿದು ನಡೆಸಿಕೊಂಡು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು.
Kannada BSI Bible 2016
ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಬೆಳಕಿನ ಪ್ರಭಾವದಿಂದ ನನಗೆ ಕಣ್ಣುಕಾಣದೆ ಇದ್ದದರಿಂದ ನನ್ನ ಜೊತೆಯಲ್ಲಿದ್ದವರು ನನ್ನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.
Kannada Bible (KNCL) BSI 2016
ಬೆಳಕಿನ ಪ್ರಕಾಶದ ನಿಮಿತ್ತ ದೃಷ್ಟಿಹೀನನಾದೆ. ಜೊತೆಯಲ್ಲಿದ್ದವರು ನನ್ನನ್ನು ದಮಸ್ಕಸಿಗೆ ಕೈಹಿಡಿದು ನಡೆಸಿಕೊಂಡು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಬೆಳಕಿನ ಉಜ್ವಲ ಪ್ರಕಾಶದ ನಿಮಿತ್ತ ನನ್ನ ಕಣ್ಣು ಕುರುಡಾಗಿದ್ದರಿಂದ ನನ್ನ ಜೊತೆಯಲ್ಲಿದ್ದವರು ನನ್ನ ಕೈಹಿಡಿದು ದಮಸ್ಕದೊಳಗೆ ನಡೆಸಿಕೊಂಡು ಹೋದರು.