Acts 22:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನನೀಯನು ನನ್ನ ಬಳಿಗೆ ಬಂದು, ‘ಸಹೋದರನಾದ ಸೌಲನೇ, ನಿನಗೆ ಮತ್ತೆ ದೃಷ್ಟಿ ಬರಲಿ!’ ಎಂದನು. ಆ ಕೂಡಲೇ ನನಗೆ ದೃಷ್ಟಿ ಬಂದಿತು ಮತ್ತು ನಾನು ಅವನನ್ನು ನೋಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಳ್ಳೆಯವನೆಂದು ಹೆಸರು ಹೊಂದಿದವನೂ ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು, ನಿಂತು; ‘ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದಿಕೋ’ ಎಂದು ಹೇಳಿದನು. ಹೇಳಿದ ತಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು.
Kannada BSI Bible 2016
ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು ನಿಂತು - ಸಹೋದರನಾದ ಸೌಲನೇ, ನಿನಗೆ ಕಣ್ಣುಕಾಣಿಸಲಿ ಎಂದು ಹೇಳಿದನು. ಹೇಳಿದಾಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು.
Kannada Bible (KNCL) BSI 2016
ಅವನು ಬಂದು ನನ್ನ ಬಳಿ ನಿಂತು, ‘ಸಹೋದರ ಸೌಲನೇ, ದೃಷ್ಟಿಯನ್ನು ಪಡೆ,’ ಎಂದನು. ಆ ಕ್ಷಣವೇ ನಾನು ದೃಷ್ಟಿಪಡೆದು ಅವನನ್ನು ನೋಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನನ್ನ ಬಳಿ ನಿಂತುಕೊಂಡು, ‘ಸಹೋದರ ಸೌಲನೇ, ನೀನು ದೃಷ್ಟಿಯನ್ನು ಪಡೆದುಕೋ,’ ಎಂದನು. ಆ ಗಳಿಗೆಯಲ್ಲಿಯೇ ನಾನು ದೃಷ್ಟಿಯನ್ನು ಪಡೆದು ಅವನನ್ನು ಕಂಡೆನು.