Acts 22:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅನನೀಯನು ನನಗೆ, ‘ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.
Kannada BSI Bible 2016
ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನು - ನಮ್ಮ ಪಿತೃಗಳ ದೇವರು ತನ್ನ ಚಿತ್ತವನ್ನು ನೀನು ತಿಳುಕೊಳ್ಳುವದಕ್ಕೂ ಆ ನೀತಿವಂತನನ್ನು ನೋಡುವದಕ್ಕೂ ಆತನ ಬಾಯಿಂದ ಒಂದು ಮಾತನ್ನು ಕೇಳುವದಕ್ಕೂ ನಿನ್ನನ್ನು ನೇವಿುಸಿದ್ದಾನೆ.
Kannada Bible (KNCL) BSI 2016
ಆಗ ಅವನು, ‘ನಮ್ಮ ಪೂರ್ವಜರ ದೇವರು ತಮ್ಮ ಚಿತ್ತವನ್ನು ನೀನು ಅರಿಯಬೇಕೆಂದು, ತಮ್ಮ ಸತ್ಯಸ್ವರೂಪಿಯನ್ನು ನೀನು ನೋಡಬೇಕೆಂದು, ತಮ್ಮ ಕಂಠಸ್ವರವನ್ನು ನೀನು ಕೇಳಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಅವನು, ‘ನಮ್ಮ ಪಿತೃಗಳ ದೇವರು ತಮ್ಮ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕಾಗಿಯೂ ನೀತಿವಂತ ಆಗಿರುವ ಒಬ್ಬರನ್ನು ಕಾಣುವುದಕ್ಕಾಗಿಯೂ ಅವರ ಬಾಯಿಂದ ಒಂದು ಮಾತನ್ನು ಕೇಳುವುದಕ್ಕಾಗಿಯೂ ನಿನ್ನನ್ನು ಮುಂದಾಗಿಯೇ ನೇಮಿಸಿದ್ದಾರೆ.