Acts 22:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಯೇಸುವನ್ನು ಕಂಡೆನು. ಆತನು ನನಗೆ, ‘ಬೇಗನೆ ಜೆರುಸಲೇಮಿನಿಂದ ಹೊರಡು! ನನ್ನ ಕುರಿತಾದ ಸಾಕ್ಷಿಯನ್ನು ಈ ಜನರು ಸ್ವೀಕರಿಸುವುದಿಲ್ಲ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು; ‘ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ’ ಅಂದನು.
Kannada BSI Bible 2016
ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ನೀನು ತ್ವರೆಪಟ್ಟು ಬೇಗನೆ ಯೆರೂಸಲೇವಿುನಿಂದ ಹೊರಟುಹೋಗು, ನನ್ನ ವಿಷಯದಲ್ಲಿ ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಅಂದನು.
Kannada Bible (KNCL) BSI 2016
ಆಗ ಪ್ರಭುವೇ ನನಗೆ ದರ್ಶನವಿತ್ತು, ‘ತಡಮಾಡದೆ ನೀನು ಜೆರುಸಲೇಮಿನಿಂದ ಹೊರಟುಹೋಗು. ನನ್ನ ಬಗ್ಗೆ ನೀನು ಕೊಡುವ ಸಾಕ್ಷಿಯನ್ನು ಇಲ್ಲಿಯ ಜನರು ಸ್ವೀಕರಿಸುವುದಿಲ್ಲ,’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕರ್ತ ಯೇಸು ನನ್ನೊಂದಿಗೆ ಮಾತನಾಡುತ್ತಿರುವುದನ್ನು ಕಂಡೆನು. ಅವರು, ‘ತಡಮಾಡದೆ! ತಕ್ಷಣವೇ ಯೆರೂಸಲೇಮನ್ನು ಬಿಟ್ಟು ಹೊರಟು ಹೋಗು, ಏಕೆಂದರೆ ನೀನು ನನ್ನನ್ನು ಕುರಿತು ಹೇಳುವ ಸಾಕ್ಷಿಯನ್ನು ಅವರು ಸ್ವೀಕರಿಸುವುದಿಲ್ಲ,’ ಎಂದರು.