Acts 22:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು, ‘ಪ್ರಭುವೇ, ವಿಶ್ವಾಸಿಗಳನ್ನು ಸೆರೆಮನೆಗಳಿಗೆ ಹಾಕಿಸಿ ಹೊಡೆಸುತ್ತಿದ್ದವನು ನಾನೇ ಎಂಬುದು ಜನರಿಗೆ ಗೊತ್ತಿದೆ. ನಿನ್ನಲ್ಲಿ ನಂಬಿಕೆಯಿಟ್ಟಿರುವ ಜನರನ್ನು ಪತ್ತೆಹಚ್ಚಿ ಬಂಧಿಸುವುದಕ್ಕಾಗಿ ನಾನು ಎಲ್ಲಾ ಸಭಾಮಂದಿರಗಳಿಗೆ ಹೋಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅದಕ್ಕೆ ನಾನು; ‘ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ, ನಿನ್ನ ಮೇಲೆ ನಂಬಿಕೆಯಿಟ್ಟವರನ್ನು, ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು,
Kannada BSI Bible 2016
ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ನಾನು - ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸುತ್ತಾ ಹೊಡಿಸುತ್ತಾ ಇದ್ದೆನೆಂಬದನ್ನು ಅವರೇ ತಿಳಿದಿದ್ದಾರೆ;
Kannada Bible (KNCL) BSI 2016
ಅದಕ್ಕೆ ಪ್ರತ್ಯುತ್ತರವಾಗಿ ನಾನು, ‘ಪ್ರಭೂ, ನಿಮ್ಮಲ್ಲಿ ವಿಶ್ವಾಸವಿಟ್ಟವರನ್ನು ನಾನು ಸೆರೆಹಿಡಿದೆ; ಪ್ರಾರ್ಥನಾಮಂದಿರಗಳಿಗೆ ಹೋಗಿ ಅವರನ್ನು ಚಾವಟಿಯಿಂದ ಹೊಡೆದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅದಕ್ಕೆ ನಾನು, ‘ಸ್ವಾಮಿ, ಎಲ್ಲಾ ಸಭಾಮಂದಿರಗಳಲ್ಲಿಯೂ ನಿಮ್ಮಲ್ಲಿ ನಂಬಿಕೆಯಿಟ್ಟವರನ್ನು ಬಂಧಿಸಿ, ಹೊಡೆದು ಸೆರೆಮನೆಗೆ ಹಾಕಿಸುತ್ತಿದ್ದೇನೆಂದು ಈ ಜನರು ಬಲ್ಲರು.