Acts 22:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಸಾಕ್ಷಿಯಾದ ಸ್ತೆಫನನು ಕೊಲ್ಲಲ್ಪಟ್ಟಾಗ ನಾನು ಅಲ್ಲಿದ್ದದ್ದು ಸಹ ಜನರಿಗೆ ಗೊತ್ತಿದೆ. ಸ್ತೆಫನನನ್ನು ಕೊಲ್ಲಲು ಅವರು ನಿರ್ಧರಿಸಿದಾಗ ನಾನೂ ಅದಕ್ಕೆ ಒಪ್ಪಿಗೆ ಸೂಚಿಸಿ ಅಲ್ಲೇ ನಿಂತುಕೊಂಡಿದ್ದೆನು. ಅಲ್ಲದೆ ಅವನನ್ನು ಕೊಲ್ಲುತ್ತಿದ್ದ ಜನರ ಮೇಲಂಗಿಗಳನ್ನು ಸಹ ನಾನು ಹಿಡಿದುಕೊಂಡಿದ್ದೆ!’ ಎಂದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.
Kannada BSI Bible 2016
ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ ನಾನೂ ಹತ್ತರ ನಿಂತು ಒಪ್ಪಿಕೊಂಡು ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ ಅಂದೆನು.
Kannada Bible (KNCL) BSI 2016
ನಿಮ್ಮ ಸಾಕ್ಷಿಯಾದ ಸ್ತೇಫನನ ಹತ್ಯೆ ನಡೆದಾಗ ನಾನೂ ಸಮ್ಮತಿಸಿ ಅಲ್ಲೇ ಇದ್ದೆ. ಅವನನ್ನು ಕೊಲೆಮಾಡುತ್ತಿದ್ದವರ ಬಟ್ಟೆಬರೆಗಳಿಗೆ ನಾನೇ ಕಾವಲು ನಿಂತೆ. ಇದೆಲ್ಲ ಅವರಿಗೆ ಚೆನ್ನಾಗಿ ಗೊತ್ತಿದೆ,’ ಎಂದೆ. ಅದಕ್ಕೆ ಪ್ರಭು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸಾಕ್ಷಿಯಾದ ಸ್ತೆಫನನ ರಕ್ತ ಸುರಿಸಿದಾಗ ಅದಕ್ಕೆ ನಾನೂ ಸಮ್ಮತಿ ಕೊಟ್ಟು ಅವನನ್ನು ಕೊಲ್ಲುವವರ ಬಟ್ಟೆಗಳನ್ನು ಕಾಯುತ್ತಾ ನಿಂತಿದ್ದೆನು,’ ಎಂದೆನು.