Acts 22:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಸೇನಾಧಿಪತಿಯು ಪೌಲನನ್ನು ದಂಡಿನ ಪಾಳೆಯದೊಳಗೆ ಕರೆದುಕೊಂಡು ಹೋಗಿ ಹೊಡೆಯಲು ಸೈನಿಕರಿಗೆ ಹೇಳಿದನು. ಜನರು ಪೌಲನ ವಿರೋಧವಾಗಿ ಈ ರೀತಿ ಕೂಗಲು ಕಾರಣವೇನೆಂದು ಪೌಲನಿಂದಲೇ ಹೇಳಿಸಬೇಕೆಂಬುದು ಸೇನಾಧಿಪತಿಯ ಅಪೇಕ್ಷೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.
Kannada BSI Bible 2016
ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬದನ್ನು ಸಹಸ್ರಾಧಿಪತಿಯು ತಿಳುಕೊಳ್ಳುವದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.
Kannada Bible (KNCL) BSI 2016
ಜನರು ಯಾವ ಕಾರಣದಿಂದ ಅವನ ವಿರುದ್ಧ ಹೀಗೆ ಮಾಡುತ್ತಿದ್ದಾರೆಂದು ಅರಿತುಕೊಳ್ಳಲು ಸಹಸ್ರಾಧಿಪತಿ ಪೌಲನನ್ನು ಕೋಟೆ ಒಳಕ್ಕೆಕೊಂಡೊಯ್ದು, ಚಾವಟಿಯಿಂದ ಹೊಡೆದು ವಿಚಾರಿಸುವಂತೆ ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಹಸ್ರಾಧಿಪತಿಯು ಪೌಲನನ್ನು ಸೈನಿಕರ ಪಾಳ್ಯದೊಳಗೆ ಒಯ್ಯಬೇಕೆಂದು, ಅವನನ್ನು ಕೊರಡೆಗಳಿಂದ ಹೊಡೆದು ಯಾವ ಅಪರಾಧಕ್ಕಾಗಿ ಜನರು ಅವನಿಗೆ ವಿರೋಧವಾಗಿ ಅರಚುತ್ತಿದ್ದರು ಎಂಬುದನ್ನು ಅವನಿಂದ ವಿಚಾರಿಸಬೇಕೆಂದು ಆಜ್ಞಾಪಿಸಿದನು.