Acts 22:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೈನಿಕರು ಹೊಡೆಯುವುದಕ್ಕಾಗಿ ಪೌಲನನ್ನು ಕಟ್ಟುತ್ತಿರಲು ಅಲ್ಲಿದ್ದ ರೋಮ್ ಅಧಿಕಾರಿಗೆ ಪೌಲನು, “ಅಪರಾಧಿಯೆಂದು ತೀರ್ಪಾಗಿಲ್ಲದ ರೋಮ್ ಪ್ರಜೆಯೊಬ್ಬನನ್ನು ಹೊಡೆಯಲು ನಿಮಗೆ ಹಕ್ಕಿದೆಯೋ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.
Kannada BSI Bible 2016
ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಪೌಲನನ್ನು ಬೊಗ್ಗಿಸಿ ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು - ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ ಕೊರಡೆಗಳಿಂದ ಹೊಡಿಸುವದು ನಿಮಗೆ ನ್ಯಾಯವೋ? ಎಂದು ಕೇಳಿದನು.
Kannada Bible (KNCL) BSI 2016
ಹೊಡೆಯುವುದಕ್ಕಾಗಿ ಅವನನ್ನು ಬಾರುಗಳಿಂದ ಕಟ್ಟುತ್ತಿದ್ದಾಗ ಪೌಲನು, ಹತ್ತಿರವೇ ನಿಂತಿದ್ದ ಶತಾಧಿಪತಿಯನ್ನು ನೋಡಿ, “ರೋಮಿನ ಪೌರನನ್ನು ಚಾವಟಿಯಿಂದ ಹೊಡೆಯುವುದು, ಅದೂ ವಿಚಾರಣೆಮಾಡದೆ ಹೊಡೆಯಿಸುವುದು, ನ್ಯಾಯಸಮ್ಮತವೋ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಅವನನ್ನು ಹೊಡೆಯುವುದಕ್ಕೆ ಬಾರುಕೋಲನ್ನು ಚಾಚಿದಾಗ ಪೌಲನು ಅಲ್ಲಿ ನಿಂತಿದ್ದ ಶತಾಧಿಪತಿಗೆ, “ಅಪರಾಧಿಯೆಂದು ಸಿದ್ಧವಾಗುವ ಮೊದಲೇ ರೋಮ್ ಪೌರನನ್ನು ಕೊರಡೆಗಳಿಂದ ಹೊಡೆಯುವುದು ನ್ಯಾಯವಾದದ್ದೋ?” ಎಂದು ಕೇಳಿದನು.