Acts 22:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಅಧಿಕಾರಿಯು ಇದನ್ನು ಕೇಳಿದ ಕೂಡಲೇ ಸೇನಾಧಿಪತಿಯ ಬಳಿಗೆ ಬಂದು, “ನೀನು ಏನು ಮಾಡುತ್ತಿರುವೆ ಎಂಬುದು ನಿನಗೆ ಗೊತ್ತಿದೆಯೋ? ಈ ಮನುಷ್ಯನು ರೋಮಿನ ಪ್ರಜೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು,
Kannada BSI Bible 2016
ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್‌ನವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ - ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು ಎಂದು ಹೇಳಲು
Kannada Bible (KNCL) BSI 2016
ಇದನ್ನು ಕೇಳಿದ್ದೇ, ಶತಾಧಿಪತಿಯು ಸೈನ್ಯಾಧಿಪತಿಯ ಬಳಿಗೆ ಬಂದು, “ನೀವು ಮಾಡಿಸುತ್ತಿರುವುದಾದರೂ ಏನು? ಆ ಮನುಷ್ಯ ರೋಮಿನ ಪೌರನು,” ಎಂದು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶತಾಧಿಪತಿ ಈ ಮಾತುಗಳನ್ನು ಕೇಳಿದಾಗ, ಸಹಸ್ರಾಧಿಪತಿಯ ಬಳಿಗೆ ಹೋಗಿ ಇದನ್ನು ವರದಿ ಮಾಡಿ, “ಇವನು ರೋಮ್ ಪೌರನು. ಈಗ ನೀನೇನು ಮಾಡಬೇಕೆಂದಿದ್ದೀ?” ಎಂದು ಅವನನ್ನು ಪ್ರಶ್ನಿಸಿದನು.