Acts 22:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೇನಾಧಿಪತಿಯು, “ನಾನು ರೋಮಿನ ಪ್ರಜೆಯಾಗಲು ಬಹಳ ಹಣಕೊಟ್ಟಿರುವೆ” ಎಂದು ಹೇಳಿದನು. ಅದಕ್ಕೆ ಪೌಲನು, “ನಾನು ಹುಟ್ಟಿದಂದಿನಿಂದಲೇ ರೋಮಿನ ಪ್ರಜೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಸಹಸ್ರಾಧಿಪತಿಯು; “ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು” ಅನ್ನಲು ಪೌಲನು; “ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು” ಅಂದನು.
Kannada BSI Bible 2016
ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು, ಹೌದು ಅಂದನು. ಅದಕ್ಕೆ ಸಹಸ್ರಾಧಿಪತಿಯು - ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು ಅನ್ನಲು ಪೌಲನು - ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು ಅಂದನು.
Kannada Bible (KNCL) BSI 2016
ಅದಕ್ಕೆ ಪೌಲನು, “ಹೌದು,” ಎಂದನು. “ನಾನು ರೋಮಿನ ಪೌರನಾಗುವ ಹಕ್ಕನ್ನು ಬಹಳ ಹಣತೆತ್ತು ಪಡೆಯಬೇಕಾಯಿತು,” ಎಂದು ಸಹಸ್ರಾಧಿಪತಿ ಹೇಳಿದಾಗ, ಪೌಲನು, “ನಾನು ಹುಟ್ಟಿದಂದಿನಿಂದಲೇ ರೋಮಿನ ಪೌರನು,” ಎಂದು ಉತ್ತರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಈ ಪೌರತ್ವ ಪಡೆಯಬೇಕಾದರೆ ಅದಕ್ಕೆ ನಾನು ಬಹಳ ಹಣ ಕೊಡಬೇಕಾಯಿತು,” ಎಂದು ಸಹಸ್ರಾಧಿಪತಿಯು ಹೇಳಲು, ಪೌಲನು, “ಆದರೆ ನಾನು ಹುಟ್ಟಿದ ದಿನದಿಂದಲೇ ರೋಮಿನ ಪೌರನಾಗಿದ್ದೇನೆ,” ಎಂದನು.