Acts 22:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲನನ್ನು ಪ್ರಶ್ನಿಸಲು ಸಿದ್ಧರಾಗುತ್ತಿದ್ದ ಜನರು ಆ ಕೂಡಲೇ ಪೌಲನ ಬಳಿಯಿಂದ ಹೊರಟುಹೋದರು. ಪೌಲನನ್ನು ಆಗಲೇ ಕಟ್ಟಿಹಾಕಿದ್ದರಿಂದ ಮತ್ತು ಪೌಲನು ರೋಮಿನ ಪ್ರಜೆಯಾಗಿದ್ದರಿಂದ ಸೇನಾಧಿಪತಿಗೆ ಭಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು.
Kannada BSI Bible 2016
ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್‌ನವನೆಂದು ತಿಳಿದು ಭಯಪಟ್ಟನು.ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಹೊಡೆದು ವಿಚಾರಿಸುವದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು.
Kannada Bible (KNCL) BSI 2016
ಪೌಲನನ್ನು ಪ್ರಶ್ನಿಸಲು ಬಂದಿದ್ದವರು ಆ ಕ್ಷಣವೇ ಅವನನ್ನು ಬಿಟ್ಟು ಅಗಲಿದರು. ರೋಮಿನ ಪೌರನೊಬ್ಬನನ್ನು ಬಂಧಿಸಿದುದು ಮನವರಿಕೆಯಾದಾಗ ಸಹಸ್ರಾಧಿಪತಿಗೂ ಭಯವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನನ್ನು ಪ್ರಶ್ನಿಸಲು ಬಂದವರು ತಕ್ಷಣವೇ ಬಿಟ್ಟುಹೋದರು. ಮಾತ್ರವಲ್ಲದೆ ಪೌಲನು ರೋಮ್ ಪೌರನೆಂದು ಗ್ರಹಿಸಿದ ಅವನನ್ನು ಬೇಡಿಗಳಿಂದ ಬಂಧಿಸಿದ್ದರಿಂದ ಸಹಸ್ರಾಧಿಪತಿಯೂ ಭಯಪಟ್ಟನು.