Acts 22:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.
Kannada BSI Bible 2016
ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನ ಮೇಲೆ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಮಹಾಯಾಜಕರೂ ಹಿರೀಸಭೆಯವರೆಲ್ಲರೂ ಕೂಡಿಬರುವದಕ್ಕೆ ಅಪ್ಪಣೆಕೊಟ್ಟು ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.
Kannada Bible (KNCL) BSI 2016
ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರು ಪೌಲನ ವಿರುದ್ಧ ಏಕೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದಕ್ಕೆ ನಿಜಸಂಗತಿಯನ್ನು ಕಂಡುಹಿಡಿಯಲು ಸಹಸ್ರಾಧಿಪತಿಯು ಅಪೇಕ್ಷೆಪಟ್ಟನು. ಮರುದಿನ ಪೌಲನನ್ನು ಬಿಡುಗಡೆ ಮಾಡಿ, ಮುಖ್ಯಯಾಜಕರೂ ನ್ಯಾಯಸಭೆಯೂ ಕೂಡಿಬರಬೇಕೆಂದು ಅಪ್ಪಣೆಮಾಡಿದನು. ಆಮೇಲೆ ಪೌಲನನ್ನು ತಂದು ಅವರ ಎದುರಿನಲ್ಲಿ ನಿಲ್ಲಿಸಿದರು.