Acts 22:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.
Kannada BSI Bible 2016
ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ವಿಷಯದಲ್ಲಿ ಮಹಾಯಾಜಕನೂ ಹಿರೀಸಭೆಯವರೆಲ್ಲರೂ ಸಾಕ್ಷಿಗಳಾಗಿದ್ದಾರೆ. ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಕಾಗದಗಳನ್ನು ತೆಗೆದುಕೊಂಡು ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ದಂಡನೆಗಾಗಿ ಯೆರೂಸಲೇವಿುಗೆ ತರಬೇಕೆಂದು ಹೊರಟೆನು.
Kannada Bible (KNCL) BSI 2016
ಇದಕ್ಕೆ ಪ್ರಧಾನಯಾಜಕರು ಮತ್ತು ಪ್ರಮುಖರ ಇಡೀ ಸಭೆಯೇ ಸಾಕ್ಷಿ. ನಾನು ಅವರಿಂದಲೇ ದಮಸ್ಕಸಿನಲ್ಲಿರುವ ಯೆಹೂದ್ಯ ಬಾಂಧವರಿಗೆ ಪತ್ರಗಳನ್ನು ಪಡೆದು, ಆ ಪಟ್ಟಣಕ್ಕೆ ಹೊರಟೆ. ಅಲ್ಲಿಂದ ಕ್ರೈಸ್ತರನ್ನು ಬಂಧಿಸಿ, ಜೆರುಸಲೇಮಿಗೆ ತಂದು ಶಿಕ್ಷಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಾಯಾಜಕನೂ ಹಿರಿಸಭೆಯವರೆಲ್ಲರೂ ಇದಕ್ಕೆ ಸಾಕ್ಷಿ. ಅವರಿಂದಲೇ ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ದಂಡಿಸುವುದಕ್ಕಾಗಿಯೂ ಸೆರೆಹಿಡಿದು ಯೆರೂಸಲೇಮಿಗೆ ತರುವುದಕ್ಕಾಗಿಯೂ ದಮಸ್ಕಕ್ಕೆ ಪ್ರಯಾಣಮಾಡಿದೆನು.