Acts 23:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.
Kannada BSI Bible 2016
ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ - ಸಹೋದರರೇ, ನಾನು ಈ ದಿನದವರೆಗೂ ಒಳ್ಳೇ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ ಅಂದನು.
Kannada Bible (KNCL) BSI 2016
ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು.
Recommended Reading