Acts 23:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು.
Kannada BSI Bible 2016
ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್‌ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದ ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು - ಧೈರ್ಯದಿಂದಿರು; ನೀನು ಯೆರೂಸಲೇವಿುನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವದು ಅಂದನು.
Kannada Bible (KNCL) BSI 2016
ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು.