Acts 23:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ ಮುಂಜಾನೆ ಯೆಹೂದ್ಯರಲ್ಲಿ ಕೆಲವರು, ತಾವು ಪೌಲನನ್ನು ಕೊಲ್ಲದ ಹೊರತು ಏನನ್ನೂ ತಿನ್ನುವುದಿಲ್ಲ ಮತ್ತು ಏನನ್ನೂ ಕುಡಿಯುವುದಿಲ್ಲ ಎಂಬುದಾಗಿ ಹರಕೆ ಮಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.
Kannada BSI Bible 2016
ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ - ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವದಿಲ್ಲವೆಂದು ಶಪಥಮಾಡಿಕೊಂಡರು.
Kannada Bible (KNCL) BSI 2016
ಮಾರನೆಯ ದಿನ ಬೆಳಿಗ್ಗೆ ಕೆಲವು ಯೆಹೂದ್ಯರು ಒಟ್ಟುಗೂಡಿ ಒಳಸಂಚುಹೂಡಿದರು. ಪೌಲನನ್ನು ಕೊಲ್ಲುವ ತನಕ ತಾವು ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.