Acts 23:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಯೆಹೂದ್ಯರು ಮಹಾಯಾಜಕರ ಮತ್ತು ಯೆಹೂದ್ಯರ ಹಿರಿಯ ನಾಯಕರ ಬಳಿಗೆ ಹೋಗಿ, “ನಾವು ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂಬ ಕಠಿಣವಾದ ಹರಕೆ ಮಾಡಿಕೊಂಡಿದ್ದೇವೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; “ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ.
Kannada BSI Bible 2016
ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಮಹಾಯಾಜಕರ ಮತ್ತು ಸಭೇಹಿರಿಯರ ಬಳಿಗೆ ಹೋಗಿ - ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವದಿಲ್ಲವೆಂದು ಕಠಿನ ಶಪಥವನ್ನು ಮಾಡಿಕೊಂಡಿದ್ದೇವೆ.
Kannada Bible (KNCL) BSI 2016
ಇವರು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಹೋಗಿ ಇಂತೆಂದರು: “ನಾವು ಪೌಲನನ್ನು ಕೊಲ್ಲುವ ತನಕ ಏನನ್ನೂ ತಿನ್ನುವುದಿಲ್ಲವೆಂದು ಕಠಿಣ ಶಪಥಮಾಡಿಕೊಂಡಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮುಖ್ಯಯಾಜಕರ ಹಾಗೂ ಹಿರಿಯರ ಬಳಿಗೆ ಹೋಗಿ, “ಪೌಲನನ್ನು ಕೊಲ್ಲುವವರೆಗೆ ನಾವು ಊಟಮಾಡುವುದಿಲ್ಲ ಎಂದು ಗಂಭೀರ ಶಪಥಮಾಡಿದ್ದೇವೆ.