Acts 23:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು.
Kannada BSI Bible 2016
ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಮರ್ಶೆಮಾಡಬೇಕೆಂದು ನೆವಹೇಳಿ ಅವನನ್ನು ಕೋಟೆಯಿಂದ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ ಅವನು ಹತ್ತರ ಬರುವದಕ್ಕಿಂತ ಮುಂಚೆಯೇ ಅವನನ್ನು ಕೊಲ್ಲುವದಕ್ಕೆ ಸಿದ್ಧವಾಗಿದ್ದೇವೆ ಅಂದರು.
Kannada Bible (KNCL) BSI 2016
ಆದುದರಿಂದ ನೀವು ನ್ಯಾಸಭೆಯವರೊಂದಿಗೆ ಸೇರಿ ಪೌಲನನ್ನು ನಿಮ್ಮ ಬಳಿಗೆ ಕರೆದುತರಬೇಕೆಂದು ಸಹಸ್ರಾಧಿಪತಿಗೆ ಹೇಳಿಕಳುಹಿಸಿರಿ. ಅವನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿರಿ. ನಾವು ಹೊಂಚುಹಾಕಿಕೊಂಡಿದ್ದು ಅವನು ಇಲ್ಲಿಗೆ ಬರುವ ಮೊದಲೇ ಅವನನ್ನು ಸಂಹರಿಸಿಬಿಡುತ್ತೇವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈಗ ವಿಚಾರಣೆಯ ಬಗ್ಗೆ ಹೆಚ್ಚಿನ ನಿರ್ದಿಷ್ಟವಾದ ಮಾಹಿತಿಗಳನ್ನು ತಿಳಿದುಕೊಳ್ಳಬೇಕೆಂಬ ನೆಪದಿಂದ ಪೌಲನನ್ನು ನಿಮ್ಮ ಮುಂದೆ ತರುವಂತೆ ನೀವೂ ನ್ಯಾಯಸಭೆಯೂ ಸಹಸ್ರಾಧಿಪತಿಯನ್ನು ಬೇಡಿಕೊಳ್ಳಿರಿ. ಇಲ್ಲಿಗೆ ಬರುವ ಮೊದಲೇ ಪೌಲನನ್ನು ನಾವು ಕೊಂದುಬಿಡುತ್ತೇವೆ,” ಎಂದರು.