Acts 23:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಪೌಲನು ಸೇನಾಧಿಕಾರಿಗಳಲ್ಲಿ ಒಬ್ಬನನ್ನು ಕರೆದು, “ಈ ಯೌವನಸ್ಥನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋಗು. ಇವನು ಒಂದು ಸಂದೇಶವನ್ನು ಅವನಿಗೆ ತಿಳಿಸಬೇಕಾಗಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.
Kannada BSI Bible 2016
ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ - ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಅದೆ ಎಂದು ಹೇಳಿದನು.
Kannada Bible (KNCL) BSI 2016
ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; ಇವನು ಅವರಿಗೆ ತಿಳಿಸಬೇಕಾದ ವಿಷಯ ಒಂದಿದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು.