Acts 23:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು,
Kannada BSI Bible 2016
ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ - ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಅದೆಯಂತೆ ಎಂಬದಾಗಿ ಹೇಳಲು
Kannada Bible (KNCL) BSI 2016
ಅಂತೆಯೇ, ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ಕೈದಿ ಪೌಲನು, ನನ್ನನ್ನು ಕರೆದು, ಈ ಯುವಕನನ್ನು ನಿಮ್ಮಲ್ಲಿಗೆ ಕರೆದುಕೊಂಡು ಬರಲು ತಿಳಿಸಿದನು. ನಿಮಗೆ ಹೇಳಬೇಕಾದ ವಿಷಯವೇನೋ ಇದೆಯಂತೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಂತೆ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ನಿಮಗೆ ತಿಳಿಸತಕ್ಕ ವಿಷಯವಿದೆಯೆಂದು ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯುವಕನನ್ನು ನಿಮ್ಮ ಬಳಿ ತರುವಂತೆ ಬೇಡಿಕೊಂಡಿದ್ದಾನೆ,” ಎಂದನು.