Acts 23:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಯೌವನಸ್ಥನು, “ಇನ್ನೂ ಹೆಚ್ಚಿನ ಪ್ರಶ್ನೆಗಳನ್ನು ಪೌಲನಿಗೆ ಕೇಳಬೇಕೆಂಬ ನೆವವನ್ನು ಹೇಳಿ ನಾಳೆಯ ಆಲೋಚನಾಸಭೆಗೆ ಪೌಲನನ್ನು ಕರೆದುಕೊಂಡುಬರಬೇಕೆಂದು ಯೆಹೂದ್ಯರು ನಿನ್ನನ್ನು ಕೇಳಿಕೊಳ್ಳಲು ನಿರ್ಧರಿಸಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.
Kannada BSI Bible 2016
ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀನು ನಾಳೆ ಅವನನ್ನು ಹಿರೀಸಭೆಯ ಬಳಿಗೆ ಕರೆದುಕೊಂಡು ಬರಬೇಕೆಂದು ಕೇಳಿಕೊಳ್ಳುವದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.
Kannada Bible (KNCL) BSI 2016
ಅದಕ್ಕೆ ಆ ಯುವಕನು, “ಯೆಹೂದ್ಯರು ಒಂದುಗೂಡಿ ಒಂದು ತೀರ್ಮಾನ ಕೈಗೊಂಡಿದ್ದಾರೆ. ಅದರ ಪ್ರಕಾರ ಪೌಲನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿ, ಅವನನ್ನು ನಾಳೆ ನ್ಯಾಯಸಭೆಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಳ್ಳಲಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಯುವಕನು, “ಪೌಲನ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆಯುವ ಅಪೇಕ್ಷೆಯ ನೆಪದಲ್ಲಿ ಅವನನ್ನು ನ್ಯಾಯಸಭೆಯ ಮುಂದೆ ಕರೆತರುವಂತೆ ನಿಮ್ಮನ್ನು ಕೇಳಿಕೊಳ್ಳಲು ಯೆಹೂದ್ಯರು ತೀರ್ಮಾನಿಸಿಕೊಂಡಿದ್ದಾರೆ.