Acts 23:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು.
Kannada BSI Bible 2016
ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅವರ ಮಾತಿಗೆ ಒಡಂಬಡಬೇಡ; ಯಾಕಂದರೆ ನಾಲ್ವತ್ತಕ್ಕಿಂತ ಹೆಚ್ಚು ಮಂದಿ ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವದಿಲ್ಲವೆಂದು ಶಪಥವನ್ನು ಮಾಡಿಕೊಂಡು ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿನ್ನ ಅಪ್ಪಣೆಯನ್ನು ಎದುರುನೋಡುತ್ತಾ ಸಿದ್ಧವಾಗಿದ್ದಾರೆ ಅಂದನು.
Kannada Bible (KNCL) BSI 2016
ಆದರೆ ನೀವು ಅವರ ಮಾತನ್ನು ನಂಬಬೇಡಿ. ಏಕೆಂದರೆ, ನಾಲ್ವತ್ತಕ್ಕೂ ಹೆಚ್ಚು ಮಂದಿ ಅವನಿಗಾಗಿ ಹೊಂಚುಹಾಕಿ ಕಾದುಕೊಂಡಿರುತ್ತಾರೆ. ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿದ್ದಾರೆ. ಈಗ ಅವರು ನಿಮ್ಮ ಅನುಮತಿಯನ್ನು ಎದುರು ನೋಡುತ್ತಾ ಕಾಯುತ್ತಿದ್ದಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅವರ ಮಾತಿಗೆ ಒಪ್ಪಿಕೊಳ್ಳಬೇಡಿ, ಏಕೆಂದರೆ ನಾಲ್ವತ್ತಕ್ಕಿಂತಲೂ ಹೆಚ್ಚು ಜನರು ಅವನಿಗಾಗಿ ಹೊಂಚುಹಾಕಿದ್ದಾರೆ. ಅವನನ್ನು ಕೊಲ್ಲುವವರೆಗೆ ಊಟಮಾಡುವುದಿಲ್ಲ, ಪಾನ ಮಾಡುವುದಿಲ್ಲ, ಎಂದು ಅವರು ಶಪಥ ಮಾಡಿದ್ದಾರೆ. ಅವರ ಬೇಡಿಕೆಗೆ ನಿಮ್ಮ ಒಪ್ಪಿಗೆಯನ್ನೇ ಈಗ ಅವರು ಎದುರುನೋಡುತ್ತಾ ಇದ್ದಾರೆ,” ಎಂದು ಹೇಳಿದನು.