Acts 23:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.
Kannada BSI Bible 2016
ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ - ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.
Kannada Bible (KNCL) BSI 2016
“ಈ ವಿಷಯವನ್ನು ನೀನು ನನಗೆ ವರದಿಮಾಡಿರುವುದಾಗಿ ತಿಳಿಸಬೇಡ,” ಎಂದು ಸಹಸ್ರಾಧಿಪತಿ ಆ ಯುವಕನಿಗೆ ಆಜ್ಞೆಮಾಡಿ ಅವನನ್ನು ಕಳುಹಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈ ವಿಷಯವನ್ನು ನನಗೆ ವರದಿ ಮಾಡಿದ್ದನ್ನು ಯಾರಿಗೂ ಹೇಳಬೇಡ,” ಎಂದು ಆ ಯುವಕನಿಗೆ ಎಚ್ಚರಿಕೆಯನ್ನು ನೀಡಿ ಅವನನ್ನು ಸಹಸ್ರಾಧಿಪತಿ ಕಳುಹಿಸಿಕೊಟ್ಟನು.