Acts 23:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲನ ಪ್ರಯಾಣಕ್ಕಾಗಿ ಕೆಲವು ಕುದುರೆಗಳನ್ನು ತೆಗೆದುಕೊ. ರಾಜ್ಯಪಾಲನಾದ ಫೇಲಿಕ್ಸನ ಬಳಿಗೆ ಅವನನ್ನು ಸುರಕ್ಷಿತವಾಗಿ ಕೊಂಡೊಯ್ಯಲೇಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.
Kannada BSI Bible 2016
ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
Kannada Bible (KNCL) BSI 2016
ಕುದುರೆಗಳನ್ನು ಸಜ್ಜುಗೊಳಿಸಿ ಪೌಲನನ್ನು ಏರಿಸಿ, ರಾಜ್ಯಪಾಲ ಫೆಲಿಕ್ಸರ ಬಳಿಗೆ ಭದ್ರವಾಗಿ ಕರೆದುಕೊಂಡು ಹೋಗಿರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ಅವನು ಸುರಕ್ಷಿತವಾಗಿ ರಾಜ್ಯಪಾಲ ಫೇಲಿಕ್ಸನ ಬಳಿಗೆ ತಲುಪುವಂತೆ ವ್ಯವಸ್ಥೆಮಾಡಿರಿ,” ಎಂದು ಆಜ್ಞಾಪಿಸಿದನು.