Acts 23:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲುವುದರಲ್ಲಿದ್ದರು. ಆದರೆ ಇವನು ರೋಮ್‌ನ ಪ್ರಜೆಯೆಂಬುದು ನನಗೆ ತಿಳಿಯಿತು. ಆದ್ದರಿಂದ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಕಾಪಾಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.
Kannada BSI Bible 2016
ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್‌ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.
Kannada Bible (KNCL) BSI 2016
ಈ ವ್ಯಕ್ತಿಯನ್ನು ಯೆಹೂದ್ಯರು ಹಿಡಿದು ಕೊಲ್ಲುವುದರಲ್ಲಿದ್ದರು. ಇವನು ರೋಮಿನ ಪೌರನೆಂದು ತಿಳಿದು, ನಾನು ಸೈನಿಕರೊಡನೆ ಹೋಗಿ ಇವನನ್ನು ಬಿಡಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪೌಲನನ್ನು ಯೆಹೂದ್ಯರು ಬಂಧಿಸಿ, ಇವನನ್ನು ಕೊಲ್ಲಬೇಕೆಂದಿದ್ದರು. ಆದರೆ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಬಿಡಿಸಿದೆನು. ಇವನು ರೋಮ್ ಪೌರ ಎಂದು ನನಗೆ ಗೊತ್ತಾಯಿತು.