Acts 23:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.
Kannada BSI Bible 2016
ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರವಿಷಯಗಳನ್ನು ಹಿಡಿದು ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.
Kannada Bible (KNCL) BSI 2016
ಅಲ್ಲಿ ನನಗೆ ಕಂಡುಬಂದ ಪ್ರಕಾರ ಅವರ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಇವನ ಮೇಲೆ ಆಪಾದನೆ ಹೊರಿಸಲಾಯಿತೇ ಹೊರತು ಮರಣದಂಡನೆಗಾಗಲಿ, ಸೆರೆಮನೆಗಾಗಲಿ, ಇವನನ್ನು ಗುರಿಪಡಿಸಬಹುದಾದ ಅಪರಾಧವೇನೂ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ಮೇಲಿನ ದೋಷಾರೋಪಣೆ ಅವರ ನಿಯಮದ ಪ್ರಶ್ನೆಗಳಿಗೆ ಸಂಬಂಧಪಟ್ಟದ್ದು. ಇವನಲ್ಲಿ ಮರಣದಂಡನೆಗಾಗಲಿ, ಸೆರೆಮನೆಗಾಗಲಿ ಯೋಗ್ಯವಾದ ಯಾವ ಅಪರಾಧಗಳೂ ಇಲ್ಲವೆಂದು ನಾನು ಕಂಡುಕೊಂಡಿದ್ದೇನೆ.