Acts 23:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲನು ಅನನೀಯನಿಗೆ, “ದೇವರು ನಿನ್ನನ್ನು ಸಹ ಹೊಡೆಯುವನು! ಸುಣ್ಣ ಬಳಿದ ಗೋಡೆ ನೀನು! ಮೋಶೆಯ ಧರ್ಮಶಾಸ್ತ್ರಕ್ಕನುಸಾರವಾಗಿ ನ್ಯಾಯತೀರ್ಪು ಮಾಡಲು ಅಲ್ಲಿ ಕುಳಿತುಕೊಂಡು ನನಗೆ ಹೊಡೆಯಲು ಅವರಿಗೆ ಹೇಳುತ್ತಿರುವೆಯಾ! ಮೋಶೆಯ ಧರ್ಮಶಾಸ್ತ್ರಕ್ಕೆ ಅದು ವಿರುದ್ಧವಾದದ್ದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?” ಅಂದನು.
Kannada BSI Bible 2016
ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ಅವನಿಗೆ - ಎಲೈ ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರಾನುಸಾರವಾಗಿ ನನ್ನ ವಿಚಾರಣೆ ಮಾಡುವದಕ್ಕೆ ಕೂತುಕೊಂಡು ಧರ್ಮಶಾಸ್ತ್ರ ವಿರುದ್ಧವಾಗಿ ನನ್ನನ್ನು ಹೊಡೆಯುವದಕ್ಕೆ ಅಪ್ಪಣೆಕೊಡುತ್ತೀಯೋ? ಅಂದನು.
Kannada Bible (KNCL) BSI 2016
ಪೌಲನು ಅವನಿಗೆ, ‘ಸುಣ್ಣಬಳಿದ ಗೋಡೆ ನೀನು; ದೇವರು ನಿನ್ನನ್ನು ಹೊಡೆಯದೆ ಬಿಡರು; ಧರ್ಮಶಾಸ್ತ್ರದ ಪ್ರಕಾರ ನ್ಯಾಯವಿಚಾರಣೆ ಮಾಡಲು ಕುಳಿತಿರುವ ನೀನು ಅದೇ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ನನ್ನನ್ನು ಹೊಡೆಯುವಂತೆ ಆಜ್ಞಾಪಿಸುತ್ತಿರುವೆಯಾ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪೌಲನು ಅವನಿಗೆ, “ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವರು. ಮೋಶೆಯ ನಿಯಮದ ಪ್ರಕಾರ ನನ್ನ ನ್ಯಾಯವಿಚಾರಣೆ ಮಾಡಲು ನೀನು ಕುಳಿತುಕೊಂಡು, ನಿಯಮಕ್ಕೆ ವಿರುದ್ಧವಾಗಿ ನನ್ನನ್ನು ಹೊಡೆಯಬೇಕೆಂದು ಆಜ್ಞಾಪಿಸುತ್ತೀಯೋ?” ಎಂದನು.