Acts 23:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೆಹೂದ್ಯರಲ್ಲಿ ಕೆಲವರು ಪೌಲನನ್ನು ಕೊಲ್ಲಲು ಯೋಜನೆ ಮಾಡುತ್ತಿರುವುದು ನನಗೆ ತಿಳಿಯಿತು. ಆದ್ದರಿಂದ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ. ಅಲ್ಲದೆ ಅವನ ಮೇಲಿರುವ ದೂರುಗಳನ್ನು ನಿನಗೆ ತಿಳಿಸಬೇಕೆಂದು ನಾನು ಆಪಾದಕರಿಗೂ ಸಹ ತಿಳಿಸಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.
Kannada BSI Bible 2016
ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ಹುಟ್ಟಿತೆಂದು ನನಗೆ ತಿಳಿದುಬಂದದರಿಂದ ಕೂಡಲೆ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ಮಾತಾಡುವ ಹಾಗೆ ಅಪ್ಪಣೆ ಕೊಟ್ಟೆನು ಎಂಬದೇ.
Kannada Bible (KNCL) BSI 2016
ಆದರೂ ಇವನ ವಿರುದ್ಧ ಒಳಸಂಚು ನಡೆಯುತ್ತಲೇ ಇದೆಯೆಂದು ನನಗೆ ತಿಳಿದುಬಂದಿತು. ಕೂಡಲೇ ನಾನು ಇವನನ್ನು ತಮ್ಮ ಬಳಿಗೆ ಕಳುಹಿಸಿದ್ದೇನೆ. ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಸನ್ನಿಧಾನದಲ್ಲೇ ಬಂದು ಆ ಆಪಾದನೆಗಳನ್ನು ನಿವೇದಿಸಬಹುದೆಂದು ಅಪ್ಪಣೆಮಾಡಿದ್ದೇನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಪೌಲನ ವಿರೋಧವಾಗಿ ಒಂದು ಒಳಸಂಚು ನಡೆದಿದೆ ಎಂದು ನನಗೆ ರಹಸ್ಯ ಸುದ್ದಿ ಬಂದದ್ದರಿಂದ, ಕೂಡಲೇ ಇವನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಇವನಿಗೆ ವಿರೋಧವಾದ ಆರೋಪಣೆಯನ್ನು ನಿಮಗೆ ಸಲ್ಲಿಸಬೇಕೆಂದು ಇವನ ವಿರೋಧಿಗಳಿಗೆ ಅಪ್ಪಣೆ ಕೊಟ್ಟಿದ್ದೇನೆ.