Acts 23:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.
Kannada BSI Bible 2016
ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮೇಲೆ ತಪ್ಪುಹೊರಿಸುವವರು ಬಂದನಂತರ ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ ಎಂದು ಹೇಳಿ ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬದಾಗಿ ಅಪ್ಪಣೆಮಾಡಿದನು.
Kannada Bible (KNCL) BSI 2016
“ನಿನ್ನ ಮೇಲೆ ತಪ್ಪು ಹೊರಿಸಿದವರು ಬಂದ ಮೇಲೆ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಿನಲ್ಲಿ ಇಡಬೇಕೆಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನ ಮೇಲೆ ಆರೋಪ ಹೊರಿಸಿದವರು ಇಲ್ಲಿಗೆ ಬಂದು ತಲುಪಿದ ತರುವಾಯ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ, ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದನು.