Acts 23:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೌಲನು, “ಸಹೋದರರೇ, ಈ ಮನುಷ್ಯನು ಪ್ರಧಾನಯಾಜಕನೆಂದು ನನಗೆ ಗೊತ್ತಿರಲ್ಲಿಲ್ಲ. ‘ನಿಮ್ಮ ಜನನಾಯಕರ ಬಗ್ಗೆ ಕೆಟ್ಟಮಾತುಗಳುನ್ನು ಆಡಬಾರದು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.
Kannada BSI Bible 2016
ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು - ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ ಅಂದನು.
Kannada Bible (KNCL) BSI 2016
ಪ್ರತ್ಯುತ್ತರವಾಗಿ ಪೌಲನು, “ಸಹೋದರರೇ, ಇವರು ಪ್ರಧಾನ ಯಾಜಕರೆಂದು ನನಗೆ ತಿಳಿಯದೆ ಹೋಯಿತು. ‘ನಿಮ್ಮ ಪ್ರಜಾಪಾಲನನ್ನು ದೂಷಿಸಬೇಡ’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ ಅಲ್ಲವೆ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ಏಕೆಂದರೆ, ‘ನಿನ್ನ ಜನರ ಅಧಿಪತಿಯ ಕುರಿತಾಗಿ ಕೆಟ್ಟದ್ದನ್ನು ಮಾತನಾಡಬಾರದು’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದು ಪೌಲನು ಹೇಳಿದನು.