Acts 23:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.
Kannada BSI Bible 2016
ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು.
Kannada Bible (KNCL) BSI 2016
ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯರು, ಇನ್ನು ಕೆಲವರು ಫರಿಸಾಯರು ಎಂಬುದನ್ನು ಪೌಲನು ತಿಳಿದುಕೊಂಡು ನ್ಯಾಯಸಭೆಯಲ್ಲಿ, “ನನ್ನ ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು. ಸತ್ತವರ ಪುನರುತ್ಥಾನದ ನಿರೀಕ್ಷೆಯ ವಿಷಯದಲ್ಲಿ ನಾನು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಕೂಗಿ ಹೇಳಿದನು.