Acts 23:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲನು ಹೀಗೆ ಹೇಳಿದಾಗ, ಫರಿಸಾಯರಿಗೂ ಸದ್ದುಕಾಯರಿಗೂ ದೊಡ್ಡ ವಾಗ್ವಾದವಾಯಿತು. ಸಭೆಯಲ್ಲಿ ಭೇದ ಉಂಟಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು.
Kannada BSI Bible 2016
ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಅವನು ಹೇಳಿದಾಗ ಫರಿಸಾಯರಿಗೂ ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಭೇದವುಂಟಾಯಿತು.
Kannada Bible (KNCL) BSI 2016
ಅವನು ಹೀಗೆ ಹೇಳಿದಾಕ್ಷಣವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಾಗ್ವಾದ ಉಂಟಾಯಿತು. ಸಭೆಯಲ್ಲಿ ಭಿನ್ನಭೇದವುಂಟಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದ ಉಂಟಾಯಿತು. ಇದರಿಂದ ಸಮೂಹವು ವಿಭಾಗವಾಯಿತು.